ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿ ಒಂದಲ್ಲ ಒಂದು ಕಾರಣಕ್ಕೆ ಅಪರಾಧ ಕೃತ್ಯಗಳು ನಡೆಯುತ್ತಲೇ ಇರುತ್ತವೆ. ಬಿಬಿಎಂಟಿ(BMTC) ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೊಬ್ಬನ ಚಾಕುವಿನಿಂದ ಇರಿದು ಹುಚ್ಚಾಟ ನಡೆಸಿದ ಘಟನೆ ಬುಧವಾರ ನಡೆದಿದೆ. ಜಾರ್ಖಂಡ್ ಮೂಲದ ಹರ್ಷ ಸಿನ್ಹಾ(25) ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಬಸ್(Bus Conductor) ಕಂಡಕ್ಟರ್ ಯೋಗೇಶ್(45) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈಟ್ ಫೀಲ್ಡ್ ನ ವೈದೇಹಿ ಆಸ್ಪತ್ರೆ ಜಂಕ್ಷನ್ ಹತ್ತಿರ ಮುಂಜಾನೆ ಸುಮಾರು 7ಗಂಟೆಗೆ ಈ ಘಟನೆ ನಡೆದಿದೆ. ಬಸ್ಸಿನಲ್ಲಿ ಹುಚ್ಚಾಟ ಮೆರದವನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆತನನ್ನು ಪತ್ತೆ ಹಚ್ಚಿದ ಪೊಲೀಸರು ಬಂಧಿಸಿದ್ದಾರೆ. ಟೆಲಿಪರ್ಫಾಮೆನ್ಸ್ ಹೆಸರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಇತನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತಂತೆ. ಹೀಗಾಗಿ ಮಾನಸಿಕ ಖಿನ್ನತೆಗಾಗಿ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.