ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಬಿಎಂಟಿಸಿ ಬಸ್ ಗೆ ಒಬ್ಬರಲ್ಲ ಒಬ್ಬರು ಆಗಾಗ ಬಲಿಯಾಗುತ್ತಲೇ ಇರುತ್ತಾರೆ. ಇದೀಗ ಬುಧವಾರ ಮತ್ತೊಂದು ಘಟನೆ ನಡೆದಿದೆ. ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಜಯನಗರ 4ನೇ ಬ್ಲಾಕ್ ನಲ್ಲಿ ನಡೆದಿದೆ. ಸಂಪಂಗಿ ಮೃತ ವ್ಯಕ್ತಿಯೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕುಟುಂಬಸ್ಥರನ್ನು ಸಂಪರ್ಕಿಸುವ ಕೆಲಸವಾಗುತ್ತಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಎಲೆಕ್ಟ್ರಿಕ್ ಬಸ್ ಜಯನಗರದಿಂದ ಮೆಜೆಸ್ಟಿಕ್ ಕಡೆಗೆ ಹೊರಟಿತ್ತು. ಆಗ ಮೃತ ಸಂಪಂಗಿ ಬಸ್ ಹತ್ತಲು ಬಿಗಿಲು ಹಿಡಿದಿದ್ದಾರೆ. ಎಲೆಕ್ಟ್ರಿಕ್ ಬಸ್ ಬಾಗಿಲು ಮುಚ್ಚಿದ್ದರಿಂದ ಬೆರಳು ಕಟ್ ಆಗಿದೆ ಕೆಳಗೆ ಬಿದ್ದಿದ್ದಾರೆ. ಆಗ ಬಸ್ಸಿನ ಚಕ್ರ ಅವರ ಮೇಲೆ ಹರಿದಿದೆ. ಇದರಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.