ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ವಿಜಯಪುರ, ಬಬಲೇಶ್ವರ ಹಾಗೂ ಸಿಂದಗಿಯ ಒಟ್ಟು 57 ಪರೀಕ್ಷಾ ಕೇಂದ್ರಗಳಲ್ಲಿ 2024 ಡಿಸೆಂಬರ್ 7 ಹಾಗೂ 8ರಂದು ಎರಡು ದಿನಗಳ ಕಾಲ ಪಂಚಾಯತಿ ಅಭಿವೃದ್ದಿ ಅಧಿಕಾರಿ(PDO) ಹುದ್ದೆಗಳ ಪರೀಕ್ಷೆಗಳು ನಡೆಯಲಿವೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ದಿನದಂದು ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಹಾಗೂ ಅಭ್ಯರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟವಾಚ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್ ಮುಂತಾದ ಎಲೆಕ್ಟ್ರಾನಿಕ ವಸ್ತುಗಳನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ 8.30 ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.