ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಪ್ರವಾಹ(Flood) ಪರಿಸ್ಥಿತಿ ಎದುರಿಸುತ್ತಿರುವ ಕುಂದಾನಗರಿ ಜಿಲ್ಲೆಗೆ ಸೋಮವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಪರಿಶೀಲನೆ ನಡೆಸಿದರು. ಜಿಲ್ಲೆಯ ಯಾವೆಲ್ಲ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎನ್ನುವುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅವರಿಗೆ ಸೂಕ್ತ ಪರಿಹಾರದ ವ್ಯವಸ್ಥೆ ಮಾಡುವ ಬಗ್ಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಅವರು, ಜನರ ಸಹಕಾರವಿದ್ದರೆ ಪದೆಪದೆ ಮುಳುಗಡೆಯಾಗುತ್ತಿರುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ(Permanent Solution) ಒಗಿಸುವ ಚಿಂತನೆ ಮಾಡಲಾಗುವುದು ಎಂದರು. ಕಳೆದ 42 ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಮುಂದಿನ ವಾರ ಸಹ ಹೆಚ್ಚು ಮಳೆಯಾಗುವ ಮುನ್ಸೂಚನೆಯಿದ್ದು, ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ, ನೀರಾವರಿ, ಇಂಧನ ಸೇರಿ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಅಂತಾ ಹೇಳಿದರು.
ಹಿಂದೆ ಯಡಿಯೂರಪ್ಪನವರು(BSY) ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಅದು ದುರಪಯೋಗವಾಯಿತು. ಮೊದಲು ಕಂತು ಬಿಡುಗಡೆಯಾಯಿತು. 2 ಹಾಗೂ 3ನೇ ಪರಿಹಾರದ(Relief) ಹಣ ಇದುವರೆಗೂ ಸಿಕ್ಕಿಲ್ಲ. ಹೀಗಾಗಿ ನಮ್ಮ ಸರ್ಕಾರ 1.2 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ತಿಳಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.