ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ತಮಿಳು ನಟ ಶಿವ ಕಾರ್ತಿಕೇಯನ್ ಹಾಗೂ ನಟಿ ಸಾಯಿ ಪಲ್ಲವಿ ನಟನೆಯ ಅಮರನ್(Amaran Movie) ಸಿನಿಮಾ ಸೂಪರ್ ಹಿಟ್ ಆಗಿದೆ. ಅತ್ಯಂತ ಯಶಸ್ವಿಯಾಗಿ ಮೂವಿ ಪ್ರದರ್ಶನಗೊಳುತ್ತಿದೆ. ಹೀಗಿರುವಾಗಲೇ ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಘಟನೆ ಶನಿವಾರ ಮುಂಜಾನೆ ತಿರುನೆಲ್ವೇಲಿ ಹತ್ತಿರ ನಡೆದಿದೆ. ಈ ಕುರಿತು ಬಿಜೆಪಿ ನಾಯಕರು ಖಂಡಿಸಿದ್ದಾರೆ.
ಮೇಳಪಾಳ್ಯಂನ ಚಿತ್ರ ಮಂದಿರದ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಅದು ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾರಿಗೂ ಏನೂ ಆಗಿಲ್ಲ. ದಿವಂಗತ ಸೇನಾ ಮೇಜರ್ ಮುಕಂದ್ ವರದರಾಜನ್ ಅವರ ಜೀವನ ಕಥೆಯನ್ನು ಹೊಂದಿರುವ ಅಮರನ್ ಸಿನಿಮಾ ಎಲ್ಲರನ್ನು ಸೆಳೆಯುತ್ತಿದೆ. ರಾಜಕುಮಾರ್ ಪೆರಿಯಾಸ್ವಾಮಿ ಇದನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಯಶಸ್ಸು ಸಹಿಸದ ಮೂಲಭೂತವಾದಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಾರಾಯಣನ್ ತಿರುಪತಿ ಎಕ್ಸ್ ಖಾತೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.