ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಪ್ರಧಾನಿ ಮೋದಿ(Modi) ಅವರ ವಿದೇಶಿ ಪ್ರವಾಸದ ಸಂದರ್ಭದಲ್ಲಿ ಅವರ ವಿಮಾನದ ಮೇಲೆ ಉಗ್ರರು ದಾಳಿ ನಡೆಸುವ ಕುರಿತು ಎಚ್ಚರಿಕೆ ನೀಡಲಾಗಿದೆ ಎನ್ನುವುದು ವರದಿಯಾಗಿದೆ. ಫೆಬ್ರವರಿ 11ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆಯಂತೆ. ಫ್ರಾನ್ಸ್(France) ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ಯಾರಿಸ್ ಗೆ(Paris) ಹೋಗುವ ವೇಳೆ ವಿಮಾನದ ಮೇಲೆ ದಾಳಿ ನಡೆಸಬಹುದು ಎನ್ನುವ ಎಚ್ಚರಿಕೆ ನೀಡಲಾಗಿದೆಯಂತೆ.
ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು ಇತರೆ ಸಂಸ್ಥೆಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಒಂದಾದ ಮೇಲೆ ಒಂದರಂತೆ ಬೆದರಿಕೆ ಕರೆಗಳು(Threat Call) ಬರುತ್ತಲೇ ಇವೆ. ಸಿನಿಮಾ ನಟರು, ಉದ್ಯಮಿಗಳು, ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಕುರಿತು ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಇದೀಗ ಪ್ರಧಾನಿ ಮೋದಿಯವರ ಮೇಲೆ ದಾಳಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.