ಪ್ರಜಾಸ್ತ್ರ ವಿರುದ್ಧ
ಬೆಂಗಳೂರು(Bengaloru): ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ(pocso case) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸದಂತೆ ಹೊರಡಿಸಿದ್ದ ಆದೇಶದ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕಸದಸ್ಯ ಪೀಠ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಯಡಿಯೂರಪ್ಪ(BSY) ವಿರುದ್ಧ ಈಗಾಗ್ಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸುವಂತೆ ಬಿಎಸ್ವೈ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಅಪ್ರಾಪ್ತ ಮಗಳ ಮೇಲೆ ಲೈಂಗಿಕ(sexual assault) ದೌರ್ಜನ್ಯವೆಸಗಲಾಗಿದೆ ಎಂದು ಮಹಿಳೆಯೊಬ್ಬರು ಮಗಳೊಂದಿಗೆ ಯಡಿಯೂರಪ್ಪನವರ ಮನೆಗೆ ಬಂದಿದ್ದರು. ಈ ವೇಳೆ ಮಗಳ ಮೇಲೆ ದೌರ್ಜನ್ಯವೆಸಗಲಾಗಿದೆ ಎಂದು ಮಹಿಳೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ದೂರು ನೀಡಿದ್ದ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.