ಪ್ರಜಾಸ್ತ್ರ ಸುದ್ದಿ
ಕಾರವಾರ(Karawara): ವಿಚಾರಣಾಧೀನ ಕೈದಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ನಡೆದಿದೆ. ರೌಡಿಶೀಟರ್ ಮೊಹಮ್ಮದ್ ಅಬ್ಧಲ್ ಫಯಾನ್ ಹಾಗೂ ಕೌಶಿಕ್ ನಿಹಾಲ್ ಜೈಲಿನ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಮಾದಕ ವಸ್ತುಗಳ ಪೂರೈಕೆ ಸಂಬಂಧ ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.
ಜೈಲಿನಲ್ಲಿ ಕದ್ದುಮುಚ್ಚಿ ಮಾದಕ ದ್ರವ್ಯಗಳನ್ನು ತೆಗೆದುಕೊಳ್ಳುತ್ತಿದ್ದರು. ಕೆಲ ದಿನಗಳಿಂದ ಇದಕ್ಕೆ ಕಡಿವಾಣ ಬಿದ್ದಿದೆ. ಮಂಗಳೂರು ಜೈಲಿನಿಂದ ಇಲ್ಲಿನ ಜೈಲಿಗೆ ಸ್ಥಳಾಂತರಗೊಂಡಿದ್ದ ಇವರು ಗಲಾಟೆ ಮಾಡಿದ್ದಾರೆ. ಡಕಾತಿ ಸೇರಿ 12ಕ್ಕೂ ಹೆಚ್ಚು ಪ್ರಕರಣ ಇವರುಗಳ ಮೇಲಿವೆ.




