ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಅಟ್ಟಹಾಸ ಒಂದೆರಡಲ್ಲ. ಕ್ಷುಲ್ಲಕ ಕಾರಣಕ್ಕೂ ಆಗಾಗ ರಕ್ತ ಹರಿಸುತ್ತಲೇ ಇರ್ತಾರೆ. ಹೀಗಾಗಿ ಪೊಲೀಸ್ ಇಲಾಖೆ ರೌಡಿ ಶೀಟರ್ ಗಳ(Rowdy Sheeters) ಮನೆ ಮೇಲೆ ಆಗಾಗ ದಾಳಿ ಮಾಡಿ ಪರಿಶೀಲನೆ ನಡೆಸುತ್ತದೆ. ಅದೇ ರೀತಿ ಬೆಂಗಳೂರಿನಲ್ಲಿ 40ಕ್ಕೂ ಹೆಚ್ಚು ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.
ಸಿಸಿಬಿ(CCB) ಪೊಲೀಸರು ಬ್ಯಾಡರಹಳ್ಳಿ, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದರು. ಕುಳ್ಳ ಶಿವರಾಜ ಮನೆಯಲ್ಲಿ 10ಕ್ಕೂ ಹೆಚ್ಚು ಲಾಂಗ್ ಗಳು ಪತ್ತೆಯಾಗಿವೆ. ಇದೇ ರೀತಿ ಹಲವು ರೌಡಿ ಶೀಟರ್ ಗಳ ಮನೆಯಲ್ಲಿ ಮಚ್ಚು, ಲಾಂಗ್ ಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.