ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಿದ್ದ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ಉಲ್ಲಂಘಟಿಸಿದ ಶಾಸಕ ಜನಾರ್ಧನ್ ರೆಡ್ಡಿ ಹಾಗೂ ಅವರ ಎರಡು ಬೆಂಬಲಿಗರ ವಾಹನ ಸೇರಿ ಮೂರು ಕಾರುಗಳನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಮೂರು ಕಾರುಗಳ ಚಾಲಕರ ವಿರುದ್ಧ ದೂರು ದಾಖಲಾಗಿದೆ. ಸಂಚಾರಿ ಠಾಣೆ ಪೊಲೀಸರು ಕಾರುಗಳನ್ನು ವಶಕ್ಕೆ ಪಡೆದು ಪಂಚನಾಮೆ ಪಡೆದರು.
ಈ ಬಗ್ಗೆ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ರೆಡ್ಡಿ, ಮನೆಯಲ್ಲಿ ಹೋಮ ಆಯೋಜಿಸಲಾಗಿತ್ತು. ಸಂಚಾರ ದಟ್ಟಣೆಯಲ್ಲಿ ಸುಮಾರು ಅರ್ಧ ಗಂಟೆ ಕಳೆದಿದ್ದೇನೆ. ತುರ್ತಾಗಿ ಹೋಗಬೇಕಾಗಿದ್ದರಿಂದ ಹೋದೆ, ಇದರಲ್ಲಿ ಯಾವುದೇ ದುರುದ್ದೇಶವಿಲ್ಲ. ಮಾಧ್ಯಮಗಳಲ್ಲಿ ತಪ್ಪಾಗಿ ಬಿಂಬಿಸಲಾಗಿದೆ ಎಂದಿದ್ದಾರೆ. ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆದರೆ, ಇದರಲ್ಲಿ ಯಾರ ಹೆಸರು ಉಲ್ಲೇಖಿಸಿಲ್ಲ.