ಪ್ರಜಾಸ್ತ್ರ ಸುದ್ದಿ
ಉಳ್ಳಾಲ(Uallala): ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಫೇಸ್ ಬುಕ್ ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದೇನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಐಫ್ಐಆರ್ ದಾಖಲಾಗಿದೆ. ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸಪೋಟ್ ಮಾಡಿ ಬ್ರೋ ಉಳ್ಳಾಲ ಮಸೀದಿ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡುತ್ತೇನೆ ಎಂದು ಬರೆದುಕೊಂಡ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಶಂಕರ 11916 ಎಂಬ ಅಕೌಂಟ್ ಬಳಿಸಿ ಈ ರೀತಿ ಕಾಮೆಂಟ್ ಮಾಡಲಾಗಿದೆ. ಇದನ್ನು ಮೊಹಮ್ಮದ್ ರಿಯಾಜ್ ಕಡಂಬು ಎಂಬುವರು ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡು ಆರೋಪಿಯನ್ನು ಪೊಲೀಸರು ಕೂಡಲೇ ಬಂಧಿಸುತ್ತಾರೆ ಎಂದು ಭಾವಿಸುತ್ತೇನೆ. ಯಾವುದಕ್ಕೂ ಉಳ್ಳಾಲ ಮಸೀದಿ ಬಳಿ ಬಾಂಬ್ ಪತ್ತೆ ದಳವನ್ನು ಕಳುಹಿಸಿ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಬೇಕು ಎಂದಿದ್ದಾರೆ. ಇದಕ್ಕೆ ಪೊಲೀಸರು ಪ್ರತಿಕ್ರಿಯಿಸಿ ಶೀಘ್ರವೇ ಆರೋಪಿಯನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.




