ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸೆಪ್ಟೆಂಬರ್ 22ರಂದು ನಿಗದಿಯಾಗಿದ್ದ ಪಿಎಸ್ಐ(PSI) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಗುರುವಾರ ನಗರದಲ್ಲಿ ಮಾತನಾಡಿದ ಅವರು, 402 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರಿ ಸೆಪ್ಟೆಂಬರ್ 22ರಂದು ಪರೀಕ್ಷೆ ನಿಗದಿ ಮಾಡಿತ್ತು. ಆದರೆ, ಇದನ್ನು ಮುಂದೂಡಲಾಗಿದೆ ಎಂದರು.
ಪರೀಕ್ಷೆ ಮುಂದೂಡಿರುವ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ಕೆಐಎ(KIA) ಶೀಘ್ರದಲ್ಲಿ ಆದೇಶ ಹೊರಡಿಸುತ್ತೆ. ಸೆಪ್ಟೆಂಬರ್ 22ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ನಿಗದಿಯಾಗಿದೆ. ಅಂದೇ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆಸಿದರೆ ತೊಂದರೆಯಾಗುತ್ತೆ ಎನ್ನುವ ಕಾರಣಕ್ಕೆ ಮುಂದೂಡಲಾಗಿದೆ. ಅಲ್ಲದೇ ಪಿಎಸ್ಐಗೆ ಪರೀಕ್ಷೆ ಬರೆಯುತ್ತಿರುವ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಯುಪಿಎಸ್ ಸಿ(UPSC) ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ತೊಂದರೆಯಾಗಲಿದೆ. ಆದ್ದರಿಂದ ಪರೀಕ್ಷೆ ಮುಂದೂಡಬೇಕು ಎಂದು ಸರ್ಕಾರಕ್ಕೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು.
402 ಪಿಎಸ್ಐ ಹುದ್ದೆಗೆ 66 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆಗೂ ಒಂದು ವಾರ ಮೊದಲು ಪ್ರವೇಶಪತ್ರ ಬಿಡುಗಡೆ ಮಾಡಲಾಗುವುದು. ಆನ್ಲೈನ್ ಮೂಲಕ ಪಡೆಯಬಹುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣ(Scam) ದೊಡ್ಡ ಮಟ್ಟದಲ್ಲಿ ಚರ್ಚೆಯಾಯ್ತು. ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿಯ ತಲೆದಂಡ ಸಹ ಆಯ್ತು.