ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಪೋಕ್ಸೋ ಪ್ರಕರಣದ ಆರೋಪಿ ಕೋರ್ಟ್ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಸಿಟಿ ಸಿವಿಲ್ ಕೋರ್ಟ್ ನಲ್ಲಿ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆರೋಪಿಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.