ಪ್ರಜಾಸ್ತ್ರ ಸುದ್ದಿ
ಜೈಪುರ(Jaipur): ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರ ಯಶ್ ದಯಾಳ್ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ರಾಜಸ್ಥಾನದ ಜೈಪುರದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಈಗಾಗ್ಲೇ ಮಹಿಳೆಯೊಬ್ಬರು ಉತ್ತರ ಪ್ರದೇಶದಲ್ಲಿ ಅತ್ಯಾಚಾರವೆಸಗಿದ ಆರೋಪದಲ್ಲಿ ದೂರು ದಾಖಲಿಸಿದ್ದಾರೆ.
ಜೈಪುರದ ಸಂಗನೇರ್ ಸರ್ಕಾರ್ ಪೊಲೀಸ್ ಠಾಣೆಯ ಅಧಿಕಾರಿ ಎಫ್ಐಆರ್ ದಾಖಲಾದ ಬಗ್ಗೆ ಮಾಹಿತಿ ನೀಡಿದ್ದು, ಯಶ್ ದಯಾಳ್ ವಿರುದ್ಧ ಪೋಕ್ಸೊ ಹಾಗೂ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಬರುವ ಸೆಕ್ಷನ್ ಗಳಲ್ಲಿ ಬುಧವಾರ ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.