ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್(Pradeep Eshwar)ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದರ ಬಗ್ಗೆ ಗುರುವಾರ ಹೈಕೋರ್ಟ್ ವಿಚಾರಣೆ ನಡೆಸಿ ತಡೆಯಾಜ್ಞೆ ನೀಡಿದೆ. ಹೀಗಾಗಿ ಪ್ರತಾಪ್ ಸಿಂಹೆಗೆ ಹಿನ್ನಡೆಯಾಗಿದ್ದು, ಶಾಸಕ ಪ್ರದೀಪ್ ಈಶ್ವರಗೆ ಸ್ವಲ್ಪ ನಿರಾಳತೆಯಾಗಿದೆ.
ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾಮ ಪಂಚಾಯ್ತಿ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸುಮ್ಮನಿದ್ದರೆ ಸರಿ. ಇಲ್ಲದಿದ್ದರೆ ಕಾಂಗ್ರೆಸ್ ಪಾಳೆಯ ಮೈಸೂರಿಗೆ ಇಳಿಯಬೇಕಾಗುತ್ತೆ. ಪ್ರತಾಪ್(Pratap Simha) ಸಿಂಹ ಒಬ್ಬ ದೊಡ್ಡ ಅಯೋಗ್ಯ ಎಂದು ಕಿಡಿ ಕಾರಿದ್ದರು. ಇದರ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.