ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳನ್ನು ಹೊತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೂರು ಜಾಮೀನು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಎರಡು ಅತ್ಯಾಚಾರ ಪ್ರಕರಣ, ಒಂದು ಅಶ್ಲೀಲ ದೃಶ್ಯ ಸೆರೆ ಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಶಾಕ್ ನೀಡಿದೆ. ಪ್ರಜ್ವಲ್ ರೇವಣ್ಣ ಪರ ಜಿ.ಅರುಣ್ ವಾದ ಮಂಡಿಸಿದರು. ತನಿಖಾ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವಿವರ್ಮಾ ಕುಮಾರ ವಾದಿಸಿದರು. ಹಾಸನ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದ ನಿರೀಕ್ಷಣಾ ಜಾಮೀನು ಅರ್ಜಿಯ ಆದೇಶ ಇನ್ನೆರಡು ದಿನಗಳಲ್ಲಿ ಪ್ರಕಟಿಸುವುದಾಗಿ ತಿಳಿಸಲಾಗಿದೆ.
2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಶ್ಲೀಲ ಸಿಡಿ ಸ್ಫೋಟಗೊಂಡಿತು. ವಿದೇಶಕ್ಕೆ ಹೋಗಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ವಿರುದ್ಧ ರೆಡ್ ಕಾರ್ಡ್ ನೋಟಿಸ್ ಸಹ ಜಾರಿಯಾಗಿತ್ತು. ತಿಂಗಳ ಬಳಿಕ ಬೆಂಗಳೂರಿಗೆ ಬರುತ್ತಿದ್ದಂತೆ ವಿಮಾನ ನಿಲ್ದಾಣಕ್ಕೆ ವಶಕ್ಕೆ ಪಡೆಯಲಾಯಿತು. ಸುಮಾರು ಸುಮಾರು ಐದಾರು ತಿಂಗಳುಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಬಂಧಿಯಾಗಿದ್ದಾರೆ. ಈ ಪ್ರಕರಣ ದೇಶವ್ಯಾಪಿ ಚರ್ಚೆಯಾಯ್ತು. ಎನ್ ಡಿಎ ಮೈತ್ರಿಕೂಟಕ್ಕೆ ಪೆಟ್ಟು ಸಹ ಕೊಟ್ಟಿತು.