ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಅತ್ಯಾಚಾರ ಪ್ರಕರಣದಲ್ಲಿ ಕಳೆದೊಂದು ವರ್ಷದಿಂದ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಲಾಗಿದೆ. ಬೆಂಗಳೂರಿನ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಶುಕ್ರವಾರ 2ನೇ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿದ್ದಾರೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿಯಾಗಿದೆ.
ತಮ್ಮ ವಿರುದ್ಧದ ಆರೋಪದ ವಿಚಾರಣೆ ವಿಳಂಬಾಗುತ್ತಿದೆ. ಇದರಲ್ಲಿ ಬದಲಾವಣೆ ಉಲ್ಲೇಖಿಸಿ ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯ ಜಾಮೀನು ಅರ್ಜಿಯನ್ನು ನಿರ್ಧರಿಸಿದ ಬಳಿಕ ಹೈಕೋರ್ಟ್ ಗೆ ಹೋಗಲು ಸ್ವತಂತ್ರರು ಎಂದು ಹೇಳಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಸಾವಿರಾರು ಯುವತಿಯರಿಗೆ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡು ಸಾಕಷ್ಟು ವೈರಲ್ ಆಗಿದ್ದವು.