ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯು ಸುಪ್ರೀಂ ಕೋರ್ಟ್ ನಲ್ಲಿ ವಜಾ ಮಾಡಲಾಗಿದೆ. ನ್ಯಾಯಮೂರ್ತಿ ದೇಲಾ ಎಂ.ತ್ರಿವೇದಿ ಹಾಗೂ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಹೀಗಾಗಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಜ್ವಲ್ ಪರ ಮುಕುಲ್ ರೋಹಟಗಿ ಅವರು ವಾದ ಮಂಡಿಸಿದರು. ಆರಂಭಿಕ ದೂರಿನಲ್ಲಿ ಸಕ್ಷೆನ್ 376ರ ಉಲ್ಲೇಖವಿಲ್ಲವೆಂದು ವಾದಿಸಿದರು. ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 21ರಂದು ಜಾಮೀನು ನಿರಾಕರಿಸಿದೆ. ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದಾಗಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಸಚಿವ ಹೆಚ್.ಡಿ ರೇವಣ್ಣನವರ ಮಗ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿಯಾಗಿದೆ.