ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಕಲಿ ಫೋಟೋ ಬಿಟ್ಟಿರುವ ಸಂಬಂಧ ಬಹುಭಾಷಾ ನಟ ಪ್ರಕಾಶ್ ರಾಜ್, ಪ್ರಶಾಂತ್ ಸಂಬರಗಿ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ. ನನ್ನ ಹೆಸರಿಗೆ ಕುತ್ತು ತರುವ ಉದ್ದೇಶದಿಂದ ಫೇಸ್ ಬುಕ್ ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಿಸಿ ಸುಳ್ಳು ಶೀರ್ಷಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ನಟ ಪ್ರಕಾಶ್ ರಾಜ್, ಅನುಮತಿ ಇಲ್ಲದೆ ಯಾರದೋ ಫೋಟೋಗಳನ್ನು ಬಳಸುವುದು, ತಪ್ಪು ಪ್ರಚಾರ ಮಾಡುವುದು ಅಪರಾಧ. ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆ ಇಲ್ಲ. ಹಾಗಂತ ಅವರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಹಿಂದೆ ನಾನು ಕ್ರಿಶ್ಚಿಯನ್ ಗಿಂತ ದೊಡ್ಡ ಮಾಫಿಯಾ ಮತ್ತೊಂದಿಲ್ಲ. ಮುಸ್ಲಿಂರಲ್ಲೂ ದೊಡ್ಡ ಭಯೋತ್ಪಾದಕರು ಇದ್ದಾರೆ ಎಂದು ಹೇಳಿದ್ದೇನೆ. ಅದು ಹೈಲೆಟ್ ಆಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹರಡುವವರಿಗೆ ಪಾಠವಾಗಬೇಕು ಎನ್ನುವ ಕಾರಣಕ್ಕೆ ದೂರು ನೀಡಿದ್ದೇನೆ ಎಂದರು.