ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಮುಸ್ಲಿಂರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ, ನಗರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸೈಯದ್ ಅಬ್ರಾರ್ ಪೊಲೀಸ್ ದೂರು ನೀಡಿದ್ದಾರೆ. ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು(Case) ದಾಖಲಿಸಲಾಗಿದೆ. ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ನೀಡಲಾಗಿದೆ. ಬಿಎನ್ ಎಸ್ 196ರ ಕಾಯ್ದೆ ಅಡಿಯಲ್ಲಿ ಪೊಲೀಸರು ಎಫ್ಐಆರ್(FIR) ದಾಖಲಿಸಿಕೊಂಡಿದ್ದಾರೆ.