ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಈ ಬಾರಿಯ ದಸರಾ ಉದ್ಘಾಟನೆಯನ್ನು ಕನ್ನಡ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಮೈಸೂರು ಜಿಲ್ಲಾಡಳಿತದಿಂದ ಈಗಾಗ್ಲೇ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ಇದಕ್ಕೆ ಆರಂಭದಿಂದಲೂ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ಬಾನು ಮುಷ್ತಾಕ್ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಾಗುತ್ತೆ. ವೇದ, ಮಂತ್ರಗಳೊಂದಿಗೆ ಕಾರ್ಯಕ್ರಮ ನಡೆಯುತ್ತೆ. ಹೀಗಿರುವಾಗ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದು, ಸರ್ಕಾರದ ಕ್ರಮವನ್ನು ತಡೆಯಬೇಕು ಎಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.