ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಬಿಜೆಪಿ ಎಸ್ಸಿ ಮೋರ್ಚಾದಿಂದ ಸಿಂದಗಿಯಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿದ್ದು, ಈ ಸಂಬಂಧ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದೇವೆ ಎಂದು ಸಿಂದಗಿ ಬಿಜೆಪಿ ಎಸ್ಸಿ ಮೋರ್ಚಾ ತಾಲೂಕಾಧ್ಯಕ್ಷ ಶ್ರೀಕಾಂತ ಬಿಜಾಪೂರ ಹೇಳಿದರು. ಬೆಂಗಳೂರಿನಲ್ಲಿ ಛಲವಾದಿ ನಾರಾಯಣಸ್ವಾಮಿಯವರನ್ನು ಭೇಟಿಯಾಗಿ, ಬೃಹತ್ ಮಟ್ಟದಲ್ಲಿ ಎಸ್ಸಿ ಮೋರ್ಚಾ ಸಮಾವೇಶ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಯಾವ ರೀತಿಯಾಗಿ ರೂಪುರೇಷಗಳನ್ನು ಸಿದ್ಧಪಡಿಸಬೇಕು ಅನ್ನೋದು ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಲಾಯಿತು. ಇದೇ ವೇಳೆ ಮಾಜಿ ಶಾಸಕ ರಮೇಶ ಭೂಸನೂರ ಅವರೊಂದಿಗೆ ಫೋನ್ ಮೂಲಕ ಮಾತನಾಡಿದರು ಎಂದು ಹೇಳಿದ್ದಾರೆ.
ಎಸ್ಸಿ ಮೋರ್ಚಾ ತಾಲೂಕಾಧ್ಯಕ್ಷ ಶ್ರೀಕಾಂತ ಬಿಜಾಪೂರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು. ಈ ವೇಳೆ ಶಿವು ನಾಟೀಕಾರ, ಮಹಾವೀರ ಸುಲ್ಪಿ, ಚಂದ್ರ ಉಪಸ್ಥಿತರಿದ್ದರು.




