ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ ಅವರು ಸಾಥ್ ನೀಡಿದರು. ಈ ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ರಾಷ್ಟ್ರಪತಿಗಳಿಗೆ 21 ತೋಪಿನ ಗೌರವ ಸಲ್ಲಿಸಲಾಯಿತು. ನಂತರ ಪರೇಡ್ ನಡೆಸಲಾಯಿತು. ರಾಜ್ ಪಥ್ ವು ಕರ್ತವ್ಯಪಥ್ ಎಂದು ಮರುನಾಮಕರಗೊಂಡ ನಂತರ ನಡೆಯುತ್ತಿರುವ 3ನೇ ಗಣರಾಜ್ಯೋತ್ಸವ ಇದಾಗಿದೆ. ಇದಕ್ಕೂ ಮೊದಲು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದರು. ಪರೇಡ್ ನಲ್ಲಿ 31 ಸ್ತಬ್ಧಚಿತ್ರಗಳು ಭಾಗವಹಿಸಿದ್ದವು. ಕರ್ನಾಟಕದಿಂದ ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯಿತು.