Ad imageAd image

ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ

Nagesh Talawar
ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಭಾಷಣ ಮಾಡಿದರು. ಸಂವಿಧಾನದಲ್ಲಿ ಅಂಬೇಡ್ಕರ್ ಅವರು ಸಮಾನತೆ ಹಾಗೂ ಸಾಮಜಿಕ ನ್ಯಾಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ಇದು ಆರ್ಥಿಕ ಸಬಲೀಕರಣಕ್ಕೆ ಸಾಕ್ಷಿ. ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಿದ್ಧವಾಗಿದೆ. ಆಪರೇಷನ್ ಸಿಂಧೂರ್ ಮೂಲಕ ಭಾರತದ ರಕ್ಷಣಾ ಪಡೆಯ ಶೌರ್ಯ ಇಡೀ ಜಗತ್ತು ನೋಡಿದೆ ಅಂತಾ ಹೇಳಿದರು. ಹೀಗೆ ಹಲವು ಅಂಶಯಗಳ ಕುರಿತು ಮಾತನಾಡಿದರು. ಏಪ್ರಿಲ್ 2ರ ತನಕ ಅಂದರೆ 65 ದಿನಗಳ ಕಾಲ ಅಧಿವೇಶನ ನಡೆಯಲಿದೆ.

WhatsApp Group Join Now
Telegram Group Join Now
Share This Article