ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): 2012ರಲ್ಲಿ 2 ವರ್ಷದ ಪುಟ್ಟ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಭಾನುವಾರ ಅಧಿಕಾರಿಗಳು ತಿಳಿಸಿದ್ದಾರೆ. ಅಪರಾಧಿ ರವಿ ಅಶೋಕ ಘುಮಾರೆ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಮಹಾರಾಷ್ಟ್ರದ ಜಲ್ನಾ ನಗರದಲ್ಲಿ ಮಾರ್ಚ್ 6, 2012ರಲ್ಲಿ 2 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿದ್ದ. ಸೆಪ್ಟೆಂಬರ್ 16, 2015ರಲ್ಲಿ ವಿಚಾರಣಾ ನ್ಯಾಯಾಲಯ ಅಪರಾಧಿ ಎಂದು ತೀರ್ಪು ನೀಡಿ ಮರಣದಂಡನೆ ವಿಧಿಸಿತು. 2016ರಲ್ಲಿ ಬಾಂಬೆ ಹೈಕೋರ್ಟ್ ಎತ್ತಿ ಹಿಡಿಯಿತು. 2019ರಲ್ಲಿ ಸುಪ್ರೀಂ ಕೋರ್ಟ್ ಸಹ ಶಿಕ್ಷೆಯನ್ನು ಎತ್ತಿ ಹಿಡಿಯಿತು. ಈಗ ರಾಷ್ಟ್ರಪತಿಗಳು ಸಹ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದು, ಅಪರಾಧಿಗೆ ಮರಣದಂಡನೆಯ ಶಿಕ್ಷೆಯ ದಿನಾಂಕ ಘೋಷಿಸಬೇಕಿದೆ.




