ಪ್ರಜಾಸ್ತ್ರ ಸುದ್ದಿ
ಏಕತಾನಗರ(Ektanagar): ಸರ್ದಾರ್ ವಲ್ಲಭಭಾಯಿ ಪಟೇಲ್(Sardar Vallabhbhai Patel) ಅವರ ಜನ್ಮ ದಿನದ ನಿಮಿತ್ತ ಗುಜರಾತಿನ ನರ್ಮದಾ ಜಿಲ್ಲೆಯ ಏಕತಾನಗರದಲ್ಲಿರುವ ಬೃಹತ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ ಸಲ್ಲಿಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರು. ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿ, ಬಾಹ್ಯ ಹಾಗೂ ಆಂತರಿಕ ಶಕ್ತಿಗಳು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಜಗತ್ತಿನಲ್ಲಿ ದೇಶದ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಕೆಲಸ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.
ಜಾತಿ ಆಧಾರದಲ್ಲಿ ದೇಶವನ್ನು ಒಡೆಯುತ್ತಿದ್ದಾರೆ. ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ. ನಗರದಲ್ಲಿ ನಕ್ಸಲರು ತಲೆ ಎತ್ತುತ್ತಿದ್ದಾರೆ. ದೇಶದ ಏಕೀಕರಣದ ಬಗ್ಗೆ ಸಂಶಯ ವ್ಯಕ್ತಪಡಿಸುವ ಜನರಿದ್ದಾರೆ. ಅವರ ಮುಖವಾಡ ಕಳಚಬೇಕು ಎಂದು ತೀವ್ರ ವಾಗ್ದಾಳಿ ನಡೆಸಿದರು.