ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಜಾತಿ ಜಾತಿಗಳ ನಡುವೆ ಎತ್ತಿಕೊಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಖಾಲಿ ಪುಸ್ತಕ ತೋರಿಸಿ ಸಂವಿಧಾನವೆಂದು ಹೇಳಿ ದಲಿತ, ಆದಿವಾಸಿ ಜನರನ್ನು ಕೆರಳಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.
ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಪಾಕಿಸ್ತಾನದ ಕಾರ್ಯಸೂಚಿಯನ್ನು ಪ್ರೋತ್ಸಾಹಿಸಬಾರದು. ಜಗತ್ತಿನ ಯಾವ ಶಕ್ತಿಯಿಂದಲೂ ಆರ್ಟಿಕಲ್ 370 ಮರುಸ್ಥಾಪನೆ ಸಾಧ್ಯವಿಲ್ಲ. ಇದರ ವಿರುದ್ಧ ಬಿಜೆಪಿ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರೆ ಹೇಗೆ ಹೊರ ಹಾಕಿದರು ಎಂದು ಟಿವಿಯಲ್ಲಿ ನೋಡಿದ್ದೀರಿ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಎಸ್ಸಿ, ಎಸ್ಟಿ, ಒಬಿಸಿಗಳು ಒಗ್ಗಟ್ಟಾದರೆ ಕಾಂಗ್ರೆಸ್ ಕೊನೆಗೊಳುತ್ತದೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.