ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಪ್ರಧಾನಿ ಮೋದಿಯವರ ಜನ್ಮದಿನದ ಹಿನ್ನಲೆಯಲ್ಲಿ ಅವರ ಜೀವನಾಧರಿತ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಮಾ ವಂದೇ’ ಎಂದು ಚಿತ್ರದ ಟೈಟಲ್ ಇಡಲಾಗಿದೆ. ಕ್ರಾಂತಿ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೀರ್ ರೆಡ್ಡಿ.ಎಂ ಎಂಬುವರು ನಿರ್ಮಾಣ ಮಾಡುತ್ತಿದ್ದಾರೆ.
ನರೇಂದ್ರ ಮೋದಿ ಪಾತ್ರವನ್ನು ಮಲಯಾಳಂ ನಟ ಉಣ್ಣಿ ಮುಕುಂದನ್ ಮಾಡುತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ವಿಚಾರ ಹಂಚಿಕೊಳ್ಳಲು ಖುಷಿಯಾಗುತ್ತದೆ. ಅಹಮದಾಬಾದ್ ನಲ್ಲಿ ಬೆಳೆದ ನನಗೆ ಮೋದಿ ಸಿಎಂ ಎಂದು ತಿಳಿದಿತ್ತು. 2023ರಲ್ಲಿ ವೈಯಕ್ತಿಕವಾಗಿ ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿದ್ದು, ಮರೆಯಲಾಗದ ಕ್ಷಣವೆಂದು ಹೇಳಿದ್ದಾರೆ.