ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಚಳಿಗಾಲದ ಸಂಸತ್ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಇದಕ್ಕೂ ಮೊದಲು ಮಾತನಾಡಿದ ಪ್ರಧಾನಿ ಮೋದಿ, ಸಾರ್ವಜನಿಕ ವಿಷಯಗಳ ಕುರಿತು ಚರ್ಚೆಯಾಗಬೇಕು. ಸೋಲಿನ ಹತಾಶೆ ಸಂಸತ್ತಿನಲ್ಲಿ ಅಶಾಂತಿ ಸೃಷ್ಟಿಸಬಾರದು. ಕೆಲವು ಪಕ್ಷಗಳಿಗೆ ಇನ್ನು ಚುನಾವಣೆ ಸೋಲುಗಳನ್ನು ಒಪ್ಪಿಕೊಳ್ಳಲು ಆಗುತ್ತಿಲ್ಲ ಎಂದು ವಿಪಕ್ಷಗಳಿಗೆ ಟಾಂಗ್ ಕೊಟ್ಟರು.
ಈ ಅಧಿವೇಶನ ದೇಶದ ಪ್ರಗತಿಯನ್ನು ತೆಗೆದುಕೊಂಡು ಹೋಗುವ ನಿರಂತರ ಪ್ರಯತ್ನಗಳಿಗೆ ಕೊಡುಗೆ ನೀಡುತ್ತದೆ. ಪ್ರಜಾಪ್ರಭುತ್ವದ ಶಕ್ತಿ ಮಾತ್ರವಲ್ಲ ಆರ್ಥಿಕತೆಯ ಸ್ಥಿತಿಯ ಬಗ್ಗೆಯೂ ಜಗತ್ತು ಗಮನಿಸುತ್ತಿದೆ. ಹೀಗಾಗಿ ಸಂಸತ್ತಿನಲ್ಲಿ ದೇಶದ ಅಭಿವೃದ್ಧಿ ವಿಚಾರಗಳ ಕುರಿತು ಹೆಚ್ಚು ಚರ್ಚೆಗಳು ನಡೆಯಬೇಕು. ಅದಕ್ಕೆ ಆದ್ಯತೆ ನೀಡಬೇಕು ಎಂದರು.




