ಪ್ರಜಾಸ್ತ್ರ ಸುದ್ದಿ
ಪಾಟ್ನಾ(Patna): ಕಾಂಗ್ರೆಸ್ ಕಾರ್ಯಕರ್ತ ಪ್ರಧಾನಿ ಮೋದಿಯವರ ತಾಯಿ ಅವರಿಗೆ ಅವಾಚ್ಯವಾಗಿ ನಿಂದಿಸಿದ್ದಾನೆ ಎಂದು ಎನ್ ಡಿಎ ಮೈತ್ರಿಕೂಟದಿಂದ ಸೆಪ್ಟೆಂಬರ್ 4 ಗುರುವಾರ ಬಿಹಾರ್ ಬಂದ್ ಗೆ ಕರೆ ಕೊಡಲಾಗಿದೆ. ಪಟ್ನಾದ ಬಿಜೆಪಿ ಕಚೇರಿಯಲ್ಲಿ ಎನ್ ಡಿಎ ಮಿತ್ರ ಪಕ್ಷಗಳ ಮುಖಂಡರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಗುರುವಾರ ಮುಂಜಾನೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ಅರ್ಧ ದಿನ ಬಿಹಾರ್ ಬಂದ್ ಇರಲಿದೆ ಎಂದಿದ್ದಾರೆ.
ಕೆಲ ದಿನಗಳ ಹಿಂದೆ ದರ್ಬಾಂಗ್ ನಲ್ಲಿ ಕಾಂಗ್ರೆಸ್ ಹಾಗೂ ಆರ್ ಜೆಡಿ ನಾಯಕರು ಮತದಾರ್ ಅಧಿಕಾರ್ ಯಾತ್ರೆ ನಡೆಸಿದ್ದರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ್ ಗಾಂಧಿ ವಾದ್ರಾ, ಆರ್ ಜೆಡಿ ಯುವ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಸಮಾವೇಶದ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೋದಿ ತಾಯಿಯ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.