ಪ್ರಜಾಸ್ತ್ರ ಸುದ್ದಿ
ವಯನಾಡು(Wayanad): ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ಸಿನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ಅದ್ಧೂರಿ ರೋಡ್ ಶೋ ಮೂಲಕ ಆಗಮಿಸಿ, ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಮೂಲಕ ಮೊದಲ ಬಾರಿಗೆ ಚುನಾವಣೆಯ ಕಣಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಇಳಿದಿದ್ದಾರೆ.
ಮಂಗಳವಾರ ಮೈಸೂರು ಮೂಲಕ ಕೇರಳದ ಕಾಲಪಟ್ಟಾಗೆ ತಾಯಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯೊಂದಿಗೆ ಸಂಜೆ ತೆರಳಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ತಾಯಿ, ಸಹೋದರ, ಸಂಸದ ರಾಹುಲ್ ಗಾಂಧಿ, ಪತಿ ರಾಬರ್ಟ್ ವಾದ್ರಾ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ರಾಯ್ ಬರೇಲಿ ಹಾಗೂ ವಾಯನಾಡು ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿಜಯ ಸಧಿಸಿದ್ದರು. ರಾಯ್ ಬರೇಲಿ ಉಳಿಸಿಕೊಂಡು ವಯನಾಡು ಕ್ಷೇತ್ರದ ಸ್ಥಾನವನ್ನು ಬಿಟ್ಟುಕೊಟ್ಟರು. ಹೀಗಾಗಿ ಇಲ್ಲಿ ಉಪ ಚುನಾವಣೆ ನಡೆಯುತ್ತಿದೆ.