ಪ್ರಜಾಸ್ತ್ರ ಸುದ್ದಿ
ಕೋಲ್ಕತ್ತಾ(kolkata): ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೊಡ್ಡ ಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕೋರ್ಟ್ ನಿಂದಲೂ ಸರ್ಕಾರಕ್ಕೆ ಛಿಮಾರಿ ಹಾಕಿಲಾಗಿದೆ. ಇದೀಗ ಅತ್ಯಾಚಾರ ತಡೆ(Anti Rape bill-2024) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಅಪರಾಧಿಗೆ ಗರಿಷ್ಠ ಶಿಕ್ಷೆಗೆ ಮರಣದಂಡನೆ ಪ್ರಸ್ತಾಪಿಸಿರುವ ಮಸೂದೆಗೆ ಅಂಗೀಕಾರ ಸಿಕ್ಕಿದೆ.
ಪಶ್ಚಿಮ(west bengal) ಬಂಗಾಳ ಕ್ರಿಮಿನಲ್ ಕಾನೂನು ಮತ್ತು ತಿದ್ದುಪಡಿ ಮಸೂಸದೆ-2024 ಅನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಸಾಮೂಹಿಕ ಅತ್ಯಾಚಾರದಲ್ಲಿ ಆರೋಪಿಗಳ ಕೃತ್ಯ ನಿಜವಾಗಿದ್ದರೆ ಜೀವಾವಧಿ ಜೈಲು ಶಿಕ್ಷೆ ನೀಡುವುದು ಇದರಲ್ಲಿದೆ. ಇದರಲ್ಲಿ ಪೆರೋಲ್ ಇರುವುದಿಲ್ಲ.