Ad imageAd image

ಬಾಗಲಕೋಟೆಯಲ್ಲಿ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

Nagesh Talawar
ಬಾಗಲಕೋಟೆಯಲ್ಲಿ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ(Bagalakote): ಗುರುವಾರ ರಾತ್ರಿ ಶಿವಾಜಿ ಜಯಂತಿ ಮೆರವಣಿಗೆ ಹೊರಟಿದ್ದ ಸಂದರ್ಭದಲ್ಲಿ ಪಂಕಾ ಮಸೀದಿ ಬಳಿ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಎಸ್ಪಿ ಸಿದ್ಧಾರ್ಥ್ ಗೊಯಲ್ ಅವರ ತಲೆಗೆ ಗಾಯವಾಗಿತ್ತು. ಇದರ ನಡುವೆ ಶುಕ್ರವಾರ ಮಧ್ಯಾಹ್ನ ಮತ್ತೆ ಕಲ್ಲು ತೂರಾಟ ನಡೆದಿದೆ. ನಗರದ ತರಕಾರಿ ಮಾರುಕಟ್ಟೆ ಬಳಿ ಈ ಘಟನೆ ನಡೆದಿದೆ.

ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಕುಮಾರಸ್ವಾಮಿ ಹಿರೇಮಠ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದನ್ನು ಮುಗಿಸಿಕೊಂಡು ಬಂದ ಯುವಕರ ತಂಡ ತರಕಾರಿ ಮಾರುಕಟ್ಟೆ ಕಡೆ ಬಂದಿದೆ. ಈ ವೇಳೆ ಕಲ್ಲು ತೂರಾಟ ನಡೆದಿದೆ. ಮಾರುಕಟ್ಟೆ ಸುತ್ತಮುತ್ತಲಿನ ಅಂಗಡಿಗಳು ಬಂದ್ ಆಗಿವೆ. ಫೆಬ್ರವರಿ 24ರ ತನಕ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

WhatsApp Group Join Now
Telegram Group Join Now
Share This Article