ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಕರ್ನಾಟಕ ಪೌರ ನಿಗಮಗಳ ಅಧಿನಿಯಮದ ಅನ್ವಯ ಸ್ವತ್ತಿನ ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆಯಾಗದ ವರ್ಷದಲ್ಲಿ ಪ್ರತಿ ಹಣಕಾಸು ವರ್ಷಕ್ಕೆ ಶೇ.3 ರಿಂದ 5ರಷ್ಟು ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲು ಅವಕಾಶ ಇರುವುದರಿಂದ 2025-26ನೇ ವರ್ಷಕ್ಕೆ ಅನ್ವಯವಾಗುವಂತೆ ಏಪ್ರಿಲ್ 1, 2025ರಿಂದ ಮಾರ್ಚ್ 13, 2026ರವರೆಗೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆಯ ಆಸ್ತಿ ತೆರಿಗೆಯನ್ನು ಏಪ್ರಿಲ್ 1, 2025ರಿಂದ ಜಾರಿಗೆ ಬರುವಂತೆ ವಾಸದ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು, ಖಾಲಿ ನಿವೇಶನಗಳು ಹಾಗೂ ಕೈಗಾರಿಕಾ ಪ್ರದೇಶಕ್ಕೆ ಶೇಕಡ 3ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಲಾಗಿದೆ. ಪಾಲಿಕೆಯ 2025-26ಕ್ಕೆ ಅನ್ವಯವಾಗುವಂತೆ ಮೂಲ ಆಸ್ತಿ ತೆರಿಗೆಯಲ್ಲಿ ಶೇಕಡ 3ರಷ್ಟು ಆಸ್ತಿ ತೆರಿಗೆ ಹೆಚ್ಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.