ಪ್ರಜಾಸ್ತ್ರ ಸುದ್ದಿ
ಯಾದಗಿರಿ(Yadagiri): ನಗರ ಠಾಣೆ ಪಿಎಸ್ಐ ಪರಶುರಾಮ್ ಶುಕ್ರವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಿಎಸ್ಐ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶನಿವಾರ ಮುಂಜಾನೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಚಿತ್ತಾಪುರ ರಸ್ತೆಯ ಹತ್ತಿರ ಇರುವ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಲಾಗಿದೆ.
ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಇದರಿಂದಾಗಿ ವಾಹನ ಸಂಚಾರ ಸಮಸ್ಯೆ ಉಂಟಾಗಿದೆ. ಪ್ರತಿಭಟನಾ ಸ್ಥಳಕ್ಕೆ ಎಸ್ಪಿ ಸಂಗೀತಾ ಆಗಮಿಸಿ ಮನವೊಲಿಸಿದರೂ ಕೇಳಲಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಭಟನಾಕಾರರೊಂದಿಗೆ ಫೋನ್ ಮೂಲಕ ಮಾತನಾಡಿದರೂ ಪ್ರತಿಭಟನೆಯಿಂದ ಹಿಂದೆ ಸರೆಯುವುದಿಲ್ಲ ಎಂದಿದ್ದಾರೆ. ಯಾದಗಿರಿ ಶಾಸಕ ಹಾಗೂ ಅವರ ಮಕ್ಕಳಿಂದ ದಲಿತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಅವರ ವಿರುದ್ಧ ದೂರು ದಾಖಲಿಸಿಕೊಂಡು ಕ್ರಮ ತೆಗೆದುಕೊಳ್ಳಬೇಕು ಅಂತಾ ಆಗ್ರಹಿಸಿದರು.