ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು(Chikkamagaloru): ಜಿಲ್ಲಾಸ್ಪತ್ರೆಯ ವೈದ್ಯರ(Doctors) ಮೇಲೆ ಚಪ್ಪಲಿ ಎಸೆತದ ಪ್ರಕರಣ ನಡೆದಿದ್ದು, ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ವೈದ್ಯರು ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರು ಹಾಗೂ ಸಿಬ್ಬಂದಿ ಹೊರ ರೋಗಿ ಸೇವೆ ಬಂದ್ ಮಾಡಿ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ(Protest) ನಡೆಸಿದ್ದಾರೆ.
ಗಲಾಟೆ ಪ್ರಕರಣದಲ್ಲಿ ಇರ್ಷಾದ್ ಎಂಬಾತ ಗಾಯಗೊಂಡಿದ್ದಾನೆ. ಜಿಲ್ಲಾಸ್ಪತ್ರೆ ತುರ್ತು ಚಿಕಿತ್ಸಾ ಘಟಕದಲ್ಲಿ ಮೂಳೆ ತಜ್ಞ ವೆಂಕಟೇಶ್ ಅವರು ತಪಾಸಣೆ ನಡೆಸುವ ಸಂದರ್ಭದಲ್ಲಿ ಸಂಬಂಧಿಕರೆಲ್ಲ ಏಕಕಾಲದಲ್ಲಿ ಒಳಗೆ ನುಗ್ಗಿದ್ದಾರೆ. ಹೊರಗೆ ಹೋಗುವಂತೆ ವೈದ್ಯರು ಹೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ತಸ್ಲಿಮಾ ಎಂಬುವರು ವೈದ್ಯರ ಕೊರಳು ಪಟ್ಟಿ ಹಿಡಿದು ಎಳೆದಾಡಿದ್ದಾರೆ. ಚಪ್ಪಲಿ ಎಸೆದಿದ್ದಾರೆ. ಇದು ಮೊಬೈಲ್ ನಲ್ಲಿ ರೆಕಾರ್ಡ್ ಆಗಿದೆ.
ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ವೈದ್ಯರು, ಸಿಬ್ಬಂದಿ ಕೂಡಲೇ ತಮ್ಮ ಕರ್ತವ್ಯವನ್ನು ಸ್ಥಗಿತಗೊಳಿಸಿದರು. ಹೊರ ರೋಗಿ ವಿಭಾಗ ಬಂದ್ ಮಾಡಿ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ಆರೋಪಿಗಳನ್ನು ಬಂಧಿಸುವ ತನಕ ಕರ್ತವ್ಯಕ್ಕೆ ಹಾಜರಾಗುವುದಿಲ್ಲವೆಂದು ಹೇಳಿದ್ದಾರೆ.