ಪ್ರಜಾಸ್ತ್ರ ಸುದ್ದಿ
ಹಾಸನ(Hasana): ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಶೇಕಡ 79ರಷ್ಟು ಅಂಕ ಗಳಿಸಿದ್ದರೂ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ವಿದ್ಯಾರ್ಥಿಯೊಬ್ಬ ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಮನೋಜ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿ ನಗರದ ಅನಂತ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ವಿಜ್ಞಾನ ವಿಭಾಗದಲ್ಲಿ ಶೇಕಡ 79ರಷ್ಟು ಅಂಕ ಗಳಿಸಿದ್ದ. ಆದರೆ, ತಾನು ನಿರೀಕ್ಷಿಸಿದಷ್ಟು ಅಂಕ ಬಂದಿಲ್ಲವೆಂದು ಮನೆಯಲ್ಲಿ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 98ರಷ್ಟು ಅಂಕ ಗಳಿಸಿ ತಾಲೂಕಿನಲ್ಲಿ ಟಾಪರ್ ಆಗಿದ್ದ. ಓದಿನಲ್ಲಿ ಮುಂದೆ ಇದ್ದ ವಿದ್ಯಾರ್ಥಿ ದುಡುಕಿನ ನಿರ್ಧಾರಕ್ಕೆ ಜೀವ ಕಳೆದುಕೊಂಡಿದ್ದಾನೆ. ಇವರ ತಂದೆ ಪ್ರಕಾಶ್ ಶಿಕ್ಷಕರಾಗಿದ್ದಾರೆ. ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.