ಪ್ರಜಾಸ್ತ್ರ ಸುದ್ದಿ
ಶ್ರೀನಗರ(Srinagar): ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗುರುವಾರ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಪುಲ್ವಾಮಾ ಜಿಲ್ಲೆಯ ನಾದರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಹೀಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸಿದರು. ಆಗ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರು ಉಗ್ರರರು ಹತ್ಯೆಯಾಗಿದ್ದು, ಯೋಧರಿಗೆ ಯಾವುದೇ ಗಾಯಗಳಾಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.