Ad imageAd image

ಪ್ರಿ ಕ್ವಾರ್ಟರ್ ಫೈನಲ್ ಗೆ ಪಿ.ವಿ ಸಿಂಧು

Nagesh Talawar
ಪ್ರಿ ಕ್ವಾರ್ಟರ್ ಫೈನಲ್ ಗೆ ಪಿ.ವಿ ಸಿಂಧು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ(Paris Olympics) ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು(PV Sindhu) ಇಂದು ನಡೆದ ಪಂದ್ಯದಲ್ಲಿ ಜಯ ಗಳಿಸುವ ಮೂಲಕ ಪ್ರಿ ಕ್ವಾರ್ಟರ್ ಫೈನಲ್ ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಎಸ್ಟೋನಿಯಾದ ಕ್ರಿಸ್ಟನ್ ಕೂಬ ವಿರುದ್ಧ ಮೊದಲ ಸೆಟ್ ನಲ್ಲಿ 21-9, 2ನೇ ಸೆಟ್ ನಲ್ಲಿ 21-10ರ ಅಂತರದಲ್ಲಿ ಗೆಲುವು ಸಾಧಿಸಿದರು.

ಆರಂಭದಿಂದಲೂ ಎದುರಾಳಿ ಆಟಗಾರ್ತಿ ಮೇಲೆ ನಿಯಂತ್ರಣ ಸಾಧಿಸುತ್ತಾ ಬಂದರು. ಅದನ್ನು ಹಾಗೇ ಮುಂದುವರೆಸಿಕೊಂಡು ಹೋದ ಪರಿಣಾಮ ದೊಡ್ಡ ಅಂತರದಲ್ಲಿ ಗೆಲುವು ಪಡೆಯಲು ಸಾಧ್ಯವಾಗಿದೆ. ಈ ಬಾರಿಯೂ ಪದಕ ಗೆಲ್ಲುವ ನಿರೀಕ್ಷೆ ಮೂಡಿಸಿದ್ದಾರೆ. 2016ರಲ್ಲಿ ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ, ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಜಯಿಸಿದ್ದಾರೆ. ಇನ್ನು 2022ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಕಾಮನ್ ವೆಲ್ತ್ ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

WhatsApp Group Join Now
Telegram Group Join Now
Share This Article