ಪ್ರಜಾಸ್ತ್ರ ಸುದ್ದಿ
ಹಾವೇರಿ(Haveri): ಜಿಲ್ಲೆಯ ಶಿಗ್ಗಾವಿ(Shiggavi) ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸೈಯದ್ ಅಜ್ಜಂಪೀರ್ ಖಾದ್ರಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ ನಾಮಪತ್ರ ವಾಪಸ್ ಪಡೆಯುವ ಮೂಲಕ ಕಾಂಗ್ರೆಸ್ ನಾಯಕ ರಾಜಿ ಸಂಧಾನ ಯಶಸ್ವಿಯಾಗಿದೆ ಅನ್ನೋದು ತಿಳಿದು ಬಂದಿದೆ.
ಮಂಗಳವಾರ ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶಿವಾನಂದ ಪಾಟೀಲ ಜೊತೆಗೆ ಚುನಾವಾಣಧಿಕಾರಿ ಕಚೇರಿಗೆ ಬಂದು ನಾಮಪತ್ರ ವಾಪಸ್ ಪಡೆದರು. ಈ ವೇಳೆ ಶಾಸಕರು, ಸ್ಥಳೀಯ ಮುಖಂಡರು ಹಾಜರಿದ್ದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಖಾದ್ರಿ, ನಾನು ಸಿದ್ದರಾಮಯ್ಯನವರ ಶಿಷ್ಯ. ಯಾವುದೇ ಬೇಡಿಕೆಗಳನ್ನು ಇಟ್ಟಿಲ್ಲ. ಅವರ ಮಾರ್ಗದರ್ಶನದಲ್ಲಿ ಮುಂದುವರೆಯುತ್ತೇನೆ ಅಂತಾ ಹೇಳಿದರು.