ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸರ್ಕಾರಿ ಅಧಿಕಾರಿಗಳ ಮೇಲಿನ ದೌರ್ಜನ್ಯ ನಿಲ್ಲಬೇಕು. ಅವರಿಗೆ ರಕ್ಷಣೆ ಕೊಡಬೇಕು. ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಬಿಜೆಪಿ(BJL Leaders) ನಾಯಕರು ಪ್ರತಿಭಟನೆ ನಡೆಸಿದರು. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿಧಾನಸೌಧ ಮುಂದಿನ ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಪ್ರತಿಭಟನೆ(Protest) ನಡೆಸಿದರು.
ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಕೊಡಿ. ಸಿದ್ದು ಸರ್ಕಾರದಲ್ಲಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಎನ್ನುವ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಮತ್ತು ಕರ್ತವ್ಯ ನಿರ್ವಹಿಸಲು ಭಯ ಮುಕ್ತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.