ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಫೆಬ್ರವರಿ 9 ಹಾಗೂ 10ರಂದು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸುತ್ತಿದ್ದಾರೆ. ಈ ಕುರಿತು ಅವರೆ ಹೇಳಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಹ್ವಾನಿಸಿದ್ದು, ಕುಟುಂಬ ಸಮೇತ ಹೊರಟಿರುವುದಾಗಿ ಹೇಳಿದ್ದಾರೆ. ಇದಕ್ಕೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕಾಲೆಳೆದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಗಂಗೆಯಲ್ಲಿ ಮಿಂದ ತಕ್ಷಣ ಡಿಸಿಎಂ ಡಿ.ಕೆ ಶಿವಕುಮಾರ್ ಪಾಪಗಳೆಲ್ಲ ಕಳೆದು ಹೋಗುತ್ತಾ? ಕುಂಭಮೇಳದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪುಣ್ಯಸ್ನಾನ ಮಾಡಿದ ತಕ್ಷಣ ಕರ್ನಾಟಕದಲ್ಲಿ ಬಡತನ ನಿರ್ಮೂಲನೆ ಆಗುತ್ತಾ? ಹೀಗಂತ ಎಐಸಿಸಿ ಮಲ್ಲಿಕಾರ್ಜುನ್ ಖರ್ಗೆ ಸಾಹೇಬರು ಪ್ರಶ್ನೆ ಮಾಡಲ್ವಾ ಎಂದು ಪೋಸ್ಟ್ ಮಾಡುವ ಮೂಲಕ ಟಾಂಟ್ ಕೊಟ್ಟಿದ್ದಾರೆ.