ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿಎಂ ಸಿದ್ದರಾಮಯ್ಯನವರ ಸ್ವಾಭಿಮಾನ ಸಮಾವೇಶ ಈಗ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಜನಕಲ್ಯಾಣ ಸಮಾವೇಶ ಆಯ್ತು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಡುವೆ ಅದೇನು ಒಪ್ಪಂದ ಆಗಿದೆಯೋ ಆ ಒಪ್ಪಂದ ಕಾರ್ಯಗತ ಆಗೋಲ್ಲ ಅನ್ನೋ ಅನುಮಾನ ಡಿ.ಕೆ ಶಿವಕುಮಾರ್ ಅವರಿಗೆ ಯಾಕೆ ಕಾಡುತ್ತಿದೆಯೋ ಗೊತ್ತಿಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ದೊಡ್ಡ ರಾಜಕೀಯ ಸ್ಫೋಟವಾಗು ಎಲ್ಲ ಲಕ್ಷಣಗಳಂತೂ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸ್ವಾಮಿ ಡಿ.ಕೆ ಶಿವಕುಮಾರ್ ಅವರೆ, ತಾವು ಚಸ್ ಆದರೂ ಆಡಿ, ಫುಟ್ಬಾಲ್ ಆದರೂ ಆಡಿ. ಆದರೆ ನಿಮ್ಮ ರಾಜಕೀಯ ಮೇಲಾಟದಲ್ಲಿ ಕನ್ನಡಿಗರ ಬದುಕಿನ ಜೊತೆ ಮಾತ್ರ ಚೆಲ್ಲಾಟವಾಡಬೇಡಿ. ತಮ್ಮ ನಿಷ್ಠೆಗೆ ಹೈಕಮಾಂಡ್ ಗೌರವಧನ ಕೊಡುತ್ತೋ ಬಿಡುತ್ತೋ ಅದು ನಿಮ್ಮ ಪಕ್ಷದ ಆಂತರಿಕ ವಿಚಾರ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಮತ ನೀಡಿರುವ ಕರ್ನಾಟಕದ ಮಾತದಾರರಿಗೆ ಅಭಿವೃದ್ಧಿಯ ಗೌರವಧನ ಕೊಟ್ಟು ಕನ್ನಡಿಗರ ಋಣ ತೀರಿಸಿ. ನೀವು ವ್ಯಕ್ತಿ ಪೂಜೆ ಆದರೂ ಮಾಡಿ, ಪಕ್ಷದ ಪೂಜೆ ಆದರೂ ಮಾಡಿ. ಆದರೆ ಕರ್ನಾಟಕ ಕಾಂಗ್ರೆಸ್ ಪಕ್ಷವನ್ನು ನಂಬಿ ಅಧಿಕಾರ ಕೊಟ್ಟಿರುವ ಮತದಾರ ಪ್ರಭುಗಳಿಗೆ ದ್ರೋಹ ಬಗೆಯಬೇಡಿ ಎಂದು ತಿವಿದಿದ್ದಾರೆ.