ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ನಿಂದಿಸಿದ್ದ ಕೆಂಗೇರಿಯಲ್ಲಿರುವ ರಾಘವೇಂದ್ರಸ್ವಾಮಿ ಮಠದ ಅರ್ಚಕ ಗುರುರಾಜ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರ ಸಂಬಂಧ ಸುದ್ದಿ ವಾಹಿನಿಯೊಂದರೊಂದಿಗೆ ಮಾತನಾಡಿದ್ದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಇದು ವೈರಲ್ ಆಗಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಕುಶಾಲ್ ಅರೆವೇಗೌಡ ಎಂಬುವರು ದೂರು ದಾಖಲಿಸಿದ್ದರು.
ದೂರು ದಾಖಲಿಸಿಕೊಂಡ ಬೆಂಗಳೂರು ಹೈಗ್ರೌಂಡ್ಸ್ ಠಾಣೆ ಪೊಲೀಸರು ಶನಿವಾರ ಸಂಜೆ ಅರ್ಚಕ ಗುರುರಾಜನನ್ನು ಬಂಧಿಸಿದ್ದಾರಂತೆ. ಘಟನೆ ಕುರಿತು ಮಠದ ಕಾರ್ಯದರ್ಶಿ ಜೆ.ಎಸ್ ಭಾರದ್ವಾಜ್ ಮಾತನಾಡಿ, ಅವರ ಹೇಳಿಕೆಗೂ ಮಠಕ್ಕೂ ಸಂಬಂಧವಿಲ್ಲ. ಅವರ ಹೇಳಿಕೆಯನ್ನು ಖಂಡಿಸಲಾಗುತ್ತೆ. ಅರ್ಚಕ ಸ್ಥಾನದಿಂದ ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಅರ್ಚಕ ಗುರುರಾಜ್ ಕ್ಷಮೆ ಕೇಳಿರುವ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.