ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕಳೆದ ಬಾರಿ ನಡೆದ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಮತ ಕಳ್ಳತನ ನಡೆಸಲಾಗಿದೆ ಎನ್ನುವ ಗಂಭೀರ ಆರೋಪ ಮಾಡಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಶುಕ್ರವಾರ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ದಾಖಲೆಗಳನ್ನು ಬಿಡುಗಡೆ ಮಾಡಿದರು. ಜೊತೆಗೆ ತಮ್ಮ ಯುಟ್ಯೂಬ್ ಚಾನಲ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿದ ಬಗ್ಗೆ ಮಾತನಾಡಿದರು.
ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಬಹಿರಂಗವಾಗಿ ಒಪ್ಪಂದ ಮಾಡಿಕೊಂಡಿದೆ. ಇದು ದೇಶದ ಅತಿ ದೊಡ್ಡ ಹಗರಣವೆಂದು ಆರೋಪಿಸಿದರು. ಅಲ್ಲದೇ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಕೊಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ 100ಕ್ಕೂ ಮತಕ್ಷೇತ್ರಗಳಲ್ಲಿ ಮತ ಕಳ್ಳತನ ಮಾಡಲಾಗಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷದ 250 ಮತಗಳ ಕಳ್ಳತನವಾಗಿದೆ ಎಂದಿದ್ದಾರೆ.