Ad imageAd image

ರಾತ್ರೋರಾತ್ರಿ ಚುನಾವಣೆ ಆಯುಕ್ತರ ನೇಮಕ: ರಾಹುಲ್ ಗಾಂಧಿ ಕಿಡಿ

Nagesh Talawar
ರಾತ್ರೋರಾತ್ರಿ ಚುನಾವಣೆ ಆಯುಕ್ತರ ನೇಮಕ: ರಾಹುಲ್ ಗಾಂಧಿ ಕಿಡಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಕೇಂದ್ರ ಸರ್ಕಾರ ರಾತ್ರೋರಾತ್ರಿ ನೂತನ ಮುಖ್ಯ ಚುನಾವಣಾ ಆಯುಕ್ತರನ್ನು(CEC) ನೇಮಕ ಮಾಡಿದೆ. ಜ್ಞಾನೇಶ್ ಕುಮಾರ್ ಅವರನ್ನು ಹೊಸ ಸಿಎಸಿ ಆಗಿ ನೇಮಕ ಮಾಡಲಾಗಿದೆ. ಇದನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಸಿ ಅವರನ್ನು ತರಾತುರಿಯಲ್ಲಿ ನೇಮಕ ಮಾಡುವ ಮೂಲಕ ಪ್ರಧಾನಿ(Modi) ಮೋದಿ, ಗೃಹ ಸಚಿವ ಅಮಿತ್ ಶಾ(Amit Shah) ಅವಮಾನಿಸಿದ್ದಾರೆ ಎಂದಿದ್ದಾರೆ.

ಮುಖ್ಯ ಚುನಾವಣೆ ಆಯುಕ್ತರ ನೇಮಕದ ಬಗ್ಗೆ ನನ್ನದು ಅಸಮ್ಮತಿ ಇದೆ. ಈ ಬಗ್ಗೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಮಧ್ಯರಾತ್ರಿಯಲ್ಲಿ ಸಿಎಸಿ ಅವರನ್ನು ನೇಮಕ ಮಾಡುವುದು ಅಂದರೆ ಏನು? ಆಯ್ಕೆ ಸಮಿತಿಯಿಂದ ಮುಖ್ಯ ನ್ಯಾಯಾಧೀಶರನ್ನು ತೆಗೆದುವುದರೊಂದಿಗೆ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಲಾಗಿದೆ. ಆಯುಕ್ತರ ನೇಮಕಕ್ಕೆ ರೂಪಿಸಲಾಗಿರುವ ಕಾಯ್ದೆ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ 48 ಗಂಟೆಯಲ್ಲಿ ವಿಚಾರಣೆಗೆ ಬರಲಿದೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article