ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ತಮಿಳುನಾಡು ಪ್ರವಾಸಿ ದೆಹಲಿಗೆ ವಾಪಸ್ ಆಗುವ ಮುನ್ನ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗೆ ಪ್ರತ್ಯೇಕ ಮಾತುಕತಡೆ ನಡೆಸಿದರು. ಇದು ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ. ತಮಿಳುನಾಡಿನ ಗೂಡ್ಲೂರಿನಿಂದ ಹೆಲಿಕಾಪ್ಟರ್ ಮೂಲಕ ಸಂಜೆ 5.15ಕ್ಕೆ ಮೈಸೂರಿಗೆ ವಾಪಸ್ ಆದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗೆ ಒಂದೆರಡು ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ತುಂಬಾ ಸಂಕ್ಷಿಪ್ತ ಮಾತುಕತೆಯ ಬಗ್ಗೆ ಈಗ ತುಂಬಾ ಕುತೂಹಲ ಮೂಡಿದೆ. ಯಾವ ವಿಚಾರದ ಬಗ್ಗೆ ಇಬ್ಬರು ನಾಯಕರ ಜೊತೆಗೆ ಮಾತನಾಡಿದರು ಅನ್ನೋ ಪ್ರಶ್ನೆ ಮೂಡಿದೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವೆಲ್ಲ ಒಟ್ಟಾಗಿ ಭೇಟಿಯಾಗಿದ್ದು, ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಮಂಡಕಳ್ಳಿಯ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯನ್ನು ಸ್ವಾಗತಿಸಿದ್ದರು. ಪುಷ್ಪಗುಚ್ಛ ಹಾಗೂ ಮೈಸೂರು ಅರಮನೆ ಮಾದರಿಯನ್ನು ಉಡುಗರೆಯಾಗಿ ನೀಡಿದರು. ಈ ವೇಳೆ ಸಚಿವರಾದ ಹೆಚ್.ಸಿ ಮಹಾದೇವಪ್ಪ, ಕೆ.ಜೆ ಜಾರ್ಜ್, ಕೆ.ವೆಂಕಟೇಶ್ ಇದ್ದರು.




