ಪ್ರಜಾಸ್ತ್ರ ಸುದ್ದಿ
ರಾಯಚೂರು(Raichoru): ತೆಲಂಗಾಣದಿಂದ ರಾಜ್ಯಕ್ಕೆ ಅಕ್ರಮವಾಗಿ ಬರುತ್ತಿದ್ದ 130 ಲೀಟರ್ ಸೇಂದಿಯನ್ನು ರಾಯಚೂರು ಅಬಕಾರಿ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಸಿಎಚ್ ಪೌಡರ್ ಮಿಶ್ರಿತ ಕಲಬೆರಿಕೆ ಸೇಂದಿ ಬಾಟಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಮಾಹಿತಿದಾರರ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ.
ರಾಯಚೂರು ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಸೇಂದಿ ವಶಕ್ಕೆ ಪಡೆಯಲಾಗಿದೆ. ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ ರಾಯಚೂರು ಅವರ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದೆ. ನಾಗಮ್ಮ ಅಲಿಯಾಸ್ ಬುಜ್ಜಿ, ನರಸಮ್ಮ, ಅಜಯ್ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ. ಸ್ಥಳದಲ್ಲಿಯೇ ಪಂಚನಾಮೆ ಮಾಡಿದ ಅಬಕಾರಿ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




