ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಕೊಟ್ಟಿರುವುದನ್ನು ಖಂಡಿಸಿ, ಈಗಗ್ಲೇ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಕರಣ ಬಾಕಿಯಿದ್ದು, ಅವರ ಪ್ರಕರಣಗಳಿಗೂ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ನಡೆಸಲಾಗುತ್ತಿದೆ. ವಿಧಾನಸೌಧ ಮುಂಭಾಗದಲ್ಲಿನ ಗಾಂಧಿ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಲಾಗಿದ್ದು, ರಾಜಭವನದ ತನಕ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿಗಳು, ಶಾಸಕರು, ಪರಿಷತ್ ಸದಸ್ಯರು, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರು, ನಾಯಕರು ಭಾಗವಹಿಸಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ನಿರಾಣಿ, ಜೊಲ್ಲೆ, ಜನಾರ್ಧನ್ ರೆಡ್ಡಿ ವಿರುದ್ಧದ ಪ್ರಕರಣಗಳಿಗೂ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಹೇಳಿ ಕಾಲ್ನಡಿಗೆ ಮೂಲಕ ರಾಜಭವನದತ್ತ ಹೊರಟಿದ್ದಾರೆ.