ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಬಾಲಿವುಡ್ ಹಿರಿಯ ನಟ, ನಿರ್ದೇಶಕ ದಿ.ರಾಜ್ ಕಪೂರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯನ್ನು ಕುಟುಂಬಸ್ಥರು ಆಹ್ವಾನಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ನಟಿ ಕರೀನಾ ಕಪೂರ್ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಡಿಸೆಂಬರ್ 14ರಂದು ನಡೆಯುವ ಕಾರ್ಯಕ್ರಮಕ್ಕೆ ಬರಬೇಕೆಂದು ಕೇಳಿಕೊಂಡಿದ್ದಾರೆ. ಈ ವೇಳೆ ಸಹೋದರಿ ನಟಿ ಕರಿಷ್ಮಾ ಕಪೂರ್, ಆಕೆ ಪತಿ ನಟ ಸೈಫ್ ಅಲಿ ಖಾನ್, ನಟ ರಣಬೀರ್ ಕಪೂರ್, ನಟಿ, ಪತ್ನಿ ಆಲಿಯಾ ಭಟ್, ನೀತು ಕಪೂರ್ ಸೇರಿದಂತೆ ಕುಟುಂಬಸ್ಥರೆಲ್ಲ ಹಾಜರಿದ್ದರು.